Anganawadi Recruitment 2026: Important ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ| ಮಹಿಳೆಯರಿಗೆ ಭರ್ಜರಿ ಅವಕಾಶ

WhatsAppಫಾಲೋ ಮಾಡಿ

Anganawadi Recruitment 2026 Anganawadi Recruitment 2026: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಹಿಳೆಯರಿಗೆ ಭರ್ಜರಿ ಅವಕಾಶ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. 

ಶಿಶು ಅಭಿವೃದ್ಧಿ ಯೋಜನೆ ಅಡಿ (Child Development Project) ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು (Transgender women) ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಇದನ್ನು ಓದಿ

KSP Recruitment 2026: Important Update 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Anganawadi Recruitment 2026: ವಿದ್ಯಾರ್ಹತೆ ಎಷ್ಟು? 

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ (PUC)  ತೇರ್ಗಡೆ ಹೊಂದಿರಬೇಕು. ಎಸ್ ಎಸ್ ಎಲ್ ಸಿ (SSLC) ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Anganawadi Recruitment 2026: ವಯೋಮಿತಿ ಎಷ್ಟಿರಬೇಕು? 

ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19 ರಿಂದ 35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

Anganawadi Recruitment 2026: ಯಾವ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

ಅಧಿಕೃತ ಪ್ರಕಟಣೆಯ ಪ್ರಕಾರ, ಸದ್ಯ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಇದ್ದು ಅವುಗಳಲ್ಲಿ 17 ಅಂಗನವಾಡಿ ಕಾರ್ಯಕರ್ತೆ ( Anganawadi Worker) ಹುದ್ದೆಗಳು ಹಾಗೂ 42 ಅಂಗನವಾಡಿ ಸಹಾಯಕಿ (Anganawadi Helper) ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ.

ಒಟ್ಟು 59 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಆಯಾ ಹುದ್ದೆಗೆ ಅನುಗುಣವಾಗಿ ಗೌರವದನ (Honorarium )ನೀಡಲಾಗುತ್ತದೆ.

Anganawadi Recruitment 2026: ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು 

ಅರ್ಜಿಯೊಂದಿಗೆ ಸಾಮಾನ್ಯವಾಗಿ ಕೆಳಕಂಡ ದಾಖಲೆಗಳನ್ನು ಸಲ್ಲಿಸುವ ಸಾಧ್ಯತೆ ಇದೆ.

  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ನಿವಾಸ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಇತರೆ ಅಗತ್ಯ ದಾಖಲೆಗಳು

ಆದರೆ ಅಭ್ಯರ್ಥಿಗಳು ಅಧಿಕೃತ ಅರ್ಜಿ ನಮೂನೆ ಮತ್ತು ಪ್ರಕಟಣೆಯಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿ ದಾಖಲೆಗಳನ್ನು ಸಲ್ಲಿಸಬೇಕು.

ಇದನ್ನು ಓದಿ

ATM card insurance: ಎಟಿಎಂ ಕಾರ್ಡ್ ಇರುವವರು ಮರಣ ಹೊಂದಿದರೆ ಕುಟುಂಬಕ್ಕೆ 2,00,000 ಹಣ ಈ ಹಣ ಪಡೆಯುವುದು ಹೇಗೆ?

Anganawadi Recruitment 2026: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. 

ಆಸಕ್ತ ಅರ್ಹ ಅಭ್ಯರ್ಥಿಗಳು 2026ರ ಜೂನ್ 16ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸ್ವೀಕಾರವಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಒಳಿತು.

Anganawadi Recruitment 2026: ಅರ್ಜಿ ಸಲ್ಲಿಸುವ ವಿಧಾನ 

ಈ ನೇಮಕಾತಿಗೆ ಆಫ್ಲೈನ್  (Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಪ್ಯಾಕಿಂಗ್ ಒಳಗಡೆ ಕೆಳಕಂಡ ವಿಳಾಸಕ್ಕೆ ಸಲ್ಲಿಸಬೇಕು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಹುಕ್ಕೇರಿ ತಾಲೂಕು ಕಚೇರಿ, ಬೆಳಗಾವಿ ಜಿಲ್ಲೆ.

ಅರ್ಜಿಯನ್ನು ಖುದ್ದಾಗಿ ಸಲ್ಲಿಸಬಹುದು ಅಥವಾ ನೋಂದಾಯಿತ ಅಂಚೆ (Registered Post) ಮೂಲಕವೂ ಕಳಿಸಬಹುದು. ಆದರೆ ಅಂತಿಮ ದಿನಾಂಕದೊಳಗೆ ಕಚೇರಿಗೆ ತಲುಪುವಂತೆ ನೋಡಿಕೊಳ್ಳಬೇಕು.

ಇದನ್ನು ಓದಿ

945 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ| ತಿಂಗಳಿಗೆ ₹1.34 ಲಕ್ಷದವರೆಗೆ ಸಂಬಳ Important Karnataka Agriculture Department Jobs 2026

Anganawadi Recruitment 2026: ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ. 

ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಅರ್ಜಿ ನಮೂನೆ ಹಾಗೂ ಇತರ ವಿವರಗಳಿಗಾಗಿ ಅಭ್ಯರ್ಥಿಗಳು 080333-265099 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದ್ದು ಅರ್ಹ ಅಭ್ಯರ್ಥಿಗಳು ಸಮಯ ವ್ಯರ್ಥ ಮಾಡದೆ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದೇ ರೀತಿಯ ಹೆಚ್ಚಿನ ಮಾಹಿತಿಯ ತಕ್ಷಣದ ಮಾಹಿತಿಗಾಗಿ ಈ ವೆಬ್ ಸೈಟನ್ನು ವಾಟ್ಸಾಪ್ ಚಾನೆಲ್ ಮೂಲಕ ಫಾಲೋ ಮಾಡಿದರೆ ನಿಮಗೆ ತಕ್ಷಣದ ಮಾಹಿತಿ ಸಂಪೂರ್ಣವಾಗಿ ದೊರೆಯುತ್ತದೆ. ಏಕೆಂದರೆ ದಿನಾಂಕ ಕಳೆದ ಬಳಿಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಮುಕ್ತಾಯಗೊಂಡಿರುತ್ತದೆ ಎಂಬ ಉದ್ದೇಶದಿಂದ.

 

Leave a Comment