Danta Bhagya Yojana: ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ ಯಾವೆಲ್ಲ ಸೌಲಭ್ಯ ಪಡೆಯಬಹುದು

WhatsAppಫಾಲೋ ಮಾಡಿ

ರಾಜ್ಯದ ಅನೇಕ ಜನರಿಗೆ ಈ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೆ ಇರುವ ಕಾರಣ ಇಂದಿನ ಲೇಖನದಲ್ಲಿ ದಂತ ಭಾಗ್ಯ ಯೋಜನೆ ಅಡಿ ಅರ್ಹ ನಾಗರೀಕರು ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ? ಹಾಗೂ ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ದಂತ ಭಾಗ್ಯ ಯೋಜನೆಯು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಯಲ್ಲಿದೆ ವಯಸ್ಸಾದಂತೆ ಹಲ್ಲುಗಳ ಸಮಸ್ಯೆಯಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಹಿರಿಯ ನಾಗರೀಕರಿಗೆ ಮರು ಜೀವ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ ಹಲ್ಲುಗಳ ಸವೆತ ಅಥವಾ ಹಲ್ಲುಗಳಿಲ್ಲದೆ ಆಹಾರ ಸೇವಿಸಲು ಕಷ್ಟಪಡುತ್ತಿರುವ ಹಿರಿಯರಿಗೆ ಉಚಿತವಾಗಿ ಕೃತಕ ಹಲ್ಲುಗಳನ್ನು ಅಳವಡಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಈ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಕನಿಷ್ಠ 45 ವರ್ಷ ಮೇಲ್ಪಟ್ಟವರಾಗಿರಬೇಕು ಅಷ್ಟೇ ಅಲ್ಲದೆ ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರಬೇಕು ಸದ್ಯ ರಾಜ್ಯಾದ್ಯಂತ ಇರುವ ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಹಾಗೂ ಸರ್ಕಾರ ಗುರುತಿಸಿರುವ 44 ದಂತ ವೈದ್ಯಕೀಯ ಕಾಲೇಜುಗಳಲ್ಲಿ ಈ ಸೇವೆಯು ಲಭ್ಯವಿದ್ದು ಅರ್ಹ ನಾಗರೀಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ದಂತ ಚಿಕಿತ್ಸೆಯು ಇಂದು ಅತ್ಯಂತ ದುಬಾರಿಯಾಗಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ಆದರೆ ಸರ್ಕಾರದ ಈ ಯೋಜನೆಯಿಂದಾಗಿ ಈಗಾಗಲೇ ರಾಜ್ಯದ 41,000ಕ್ಕೂ ಹೆಚ್ಚು ಹಿರಿಯ ನಾಗರಿಕರು ಉಚಿತವಾಗಿ ಚಿಕಿತ್ಸೆ ಪಡೆದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗುಣಮಟ್ಟದ ಚಿಕಿತ್ಸೆ ಮತ್ತು ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ಈ ಪ್ರಕ್ರಿಯೆ ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಸಾಕ್ಷಿಯಾಗಿದೆ.

ಈ ಯೋಜನೆಯಿಂದ ಸಾರ್ವಜನಿಕರಿಗೆ ಯಾವೆಲ್ಲ ಪ್ರಯೋಜನಗಳಿವೆ (danta Bhagya scheme benefits) 

ಉಚಿತ ದಂತ ತಪಾಸಣೆ ಮತ್ತು ಕೃತಕ ಹಲ್ಲುಗಳ ಜೋಡಣೆ ಸೌಲಭ್ಯವನ್ನು ಈ ಯೋಜನೆಯಡಿ ಪಡೆಯಲು ಅವಕಾಶವಿರುತ್ತದೆ

ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ (how to apply for danta Bhagya) 

ದಂತ ಭಾಗ್ಯ ಯೋಜನೆ ಅಡಿ ಪ್ರಯೋಜನವನ್ನು ಪಡೆಯಲು ಅರ್ಹರಿರುವ ನಾಗರೀಕರು ಅಗತ್ಯ ದಾಖಲೆಗಳ ಸಮೇತ ಜಿಲ್ಲಾ ಕೇಂದ್ರಗಳ ಆಸ್ಪತ್ರೆ ಹಾಗೂ ನಿಗದಿಪಡಿಸಿದ ದಂತ ಕಾಲೇಜುಗಳಲ್ಲಿ ನೇರವಾಗಿ ಭೇಟಿ ನೀಡಿ ಇದರ ಸೌಲಭ್ಯವನ್ನು ಪಡೆಯಬಹುದಾಗಿದೆ.

ದಂತ ಭಾಗ್ಯ ಯೋಜನೆ ಅಡಿಯಲ್ಲಿ ಪ್ರಯೋಜನವನ್ನು ಪಡೆಯಲು ನಾಗರೀಕರು ಅವಶ್ಯಕವಾಗಿ ಒದಗಿಸಬೇಕಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ

  • ಅರ್ಜಿದಾರರ ಆಧಾರ್ ಕಾರ್ಡ್
  • ಬಿಪಿಎಲ್ ಪಡಿತರ ಚೀಟಿ
  • ಫೋಟೋ
  • ಮೊಬೈಲ್ ನಂಬರ್

ಯಾರೆಲ್ಲ ಈ ಸೌಲಭ್ಯ ಪಡೆಯಲು ಅರ್ಹರು (who can apply for danta Bhagya Yojana)

45 ವರ್ಷ ಮೇಲ್ಪಟ್ಟ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿದಾರರು ಕರ್ನಾಟಕ ರಾಜ್ಯ ಕಾಯಂ ನಿವಾಸಿಯಾಗಿದ್ದು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

ದಂತ ಭಾಗ್ಯ ಯೋಜನೆಯು ಸಮಾಜದ ಕಟ್ಟ ಕಡೆಯ ಹಿರಿಯ ನಾಗರಿಕರಿಗೂ ಉತ್ತಮ ದಂತ ಆರೋಗ್ಯ ಒದಗಿಸುವ ಗುರಿ ಹೊಂದಿದೆ ಜಿಲ್ಲಾ ಕೇಂದ್ರಗಳ ಆಸ್ಪತ್ರೆ ಹಾಗೂ ನಿಗದಿಪಡಿಸಿದ ದಂತ ಕಾಲೇಜುಗಳಲ್ಲಿ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ ತಡ ಮಾಡದೆ ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಉಚಿತ ಯೋಜನೆಯ ಲಾಭ ಪಡೆಯಬೇಕೆಂದು ಈ ಮೂಲಕ ವಿನಂತಿಸುತ್ತೇನೆ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ.

Leave a Comment